
ಎಸ್ಎಸ್ಎಲ್ಸಿ ಬಳಿಕ ಮಾಡಬಹುದಾದ ಟಾಪ್ 5 ಕೋರ್ಸ್ಗಳು
August 19, 2022ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB)ಯು ಸಂಯೋಜಿತ ಶಾಲೆಗಳ 10ನೇ ತರಗತಿ/ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯನ್ನು ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಸುತ್ತದೆ. ಮಂಡಳಿಯ ವತಿಯಿಂದ ಜರುಗುವ 10ನೇ ತರಗತಿಯ ಪರೀಕ್ಷೆಗಳಿಗೆ ಪ್ರತಿ ವರ್ಷ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಹಾಗೂ ಜೂನ್ ತಿಂಗಳಿನಲ್ಲಿ ನಡೆಯುವ ಪೂರಕ ಪರೀಕ್ಷೆಗಳಿಗೆ ಸುಮಾರು 2.2 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಅಗತ್ಯ ವಿವರಗಳು ಮತ್ತು ಮಾಹಿತಿಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕಾಲಕಾಲಕ್ಕೆ ತನ್ನ ಅಧಿಕೃತ ವೆಬ್‌ಸೈಟ್ ಲಿಂಕ್‌ನಲ್ಲಿ ಬಿಡುಗಡೆ ಮಾಡುತ್ತದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರತಿ ವರ್ಷ ನಡೆಸುವ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಪ್ರಕ್ರಿಯೆಯು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದರೊಂದಿಗೆ ಆರಂಭವಾಗುತ್ತದೆ. ಈ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅರ್ಜಿ ನಮೂನೆ ಪ್ರಕ್ರಿಯೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಒದಗಿಸಲಾಗಿದೆ. ಮಂಡಳಿಯು ಸೂಚಿಸಿದ ನಿಗದಿತ ದಿನಾಂಕದ ಮೊದಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಅರ್ಜಿ ನಮೂನೆಗಳನ್ನು ಸಲ್ಲಿಸತಕ್ಕದ್ದು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 10ನೇ ತರಗತಿಯ ಪರೀಕ್ಷೆಗಳಿಗೆ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡುತ್ತದೆ. ಮಂಡಳಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಕೆಳಗಿನ ಕೋಷ್ಟಕದಿಂದ ಪಡೆಯಬಹುದು.
ಮಂಡಳಿಯ ಹೆಸರು | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ |
---|---|
ಪರೀಕ್ಷೆಯ ಹೆಸರು | ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023 (10 ನೇ ತರಗತಿ) |
ಪರೀಕ್ಷೆಯ ಪೂರ್ಣ ಹೆಸರು | ಕರ್ನಾಟಕ ಪ್ರೌಢಶಾಲಾ ಪರೀಕ್ಷೆ ತೇರ್ಗಡೆ ಪ್ರಮಾಣ ಪತ್ರ ಪರೀಕ್ಷೆ |
ಪರೀಕ್ಷೆ ವೇಳಾಪಟ್ಟಿ ಬಿಡುಗಡೆ | ಜನವರಿ, 2023 |
ಪರೀಕ್ಷೆಯ ಆರಂಭ | ಮಾರ್ಚ್ 2023 (ತಾತ್ಕಾಲಿಕ) |
ಪರೀಕ್ಷೆಯ ಮುಕ್ತಾಯ | ಏಪ್ರಿಲ್ 2023 (ತಾತ್ಕಾಲಿಕ) |
ಅಧಿಕೃತ ವೆಬ್‌ಸೈಟ್ | ಲಿಂಕ್ |
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ರ ಮಾರ್ಚ್/ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆ/ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು 2023ರ ಜನವರಿ ತಿಂಗಳಿನಲ್ಲಿ ಅರ್ಜಿಗಳನ್ನು ಆಹ್ವಾನಿಸಲಿದೆ. ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಗೆ ನೋಂದಾಯಿಸಲು ಅರ್ಜಿ ಸಲ್ಲಿಸಬಹುದು. ಶಾಲೆಗಳ ಮುಖ್ಯ ಶಿಕ್ಷಕರು ಏಪ್ರಿಲ್ 2023ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ತಮ್ಮ ಶಾಲೆಯಲ್ಲಿನ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR, CCEPR, NSR ಮತ್ತು NSPR) ವಿವರಗಳನ್ನು ಮಂಡಳಿಯ ವೆಬ್‌ಸೈಟ್ ಲಿಂಕ್‌ನಲ್ಲಿ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್ ಮಾಡಬೇಕು.
ಹತ್ತು ವರ್ಷದ ಔಪಚಾರಿಕ ಶಿಕ್ಷಣ ಮುಗಿಸಿದ ಎಲ್ಲಾ ಶಾಲಾ ವಿದ್ಯಾರ್ಥಿಗಳು, ಹತ್ತನೇ ವರ್ಷದ ಅಂತ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಅವರನ್ನು ಈ ಕೆಳಗಿನಂತೆ ವರ್ಗೀಕರಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಶಾಲೆಯಲ್ಲಿ ನೀಡಲಾಗುವ ಅರ್ಜಿಯನ್ನು ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಿ ತಮ್ಮ ಜನ್ಮ ದಿನಾಂಕ ದೃಢೀಕರಣ ಪತ್ರ, ದೃಢೀಕೃತ ಸಹಿ ಮತ್ತು ಮೂರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂಬಂಧಿತ ಶಾಲಾ ಕಚೇರಿಯಲ್ಲಿ ಸಲ್ಲಿಸಬೇಕು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಅರ್ಜಿ ನಮೂನೆ 2023 ಅನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಶಾಲಾ ಮುಖ್ಯಸ್ಥರು ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಅರ್ಜಿಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬಹುದು. ಅರ್ಜಿ ಸಲ್ಲಿಕೆಗಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.
ಕ್ರ.ಸಂ | ವಿದ್ಯಾರ್ಥಿಗಳ ವಿವರ | ಶುಲ್ಕ |
---|---|---|
ಪ್ರಥಮ ಬಾರಿಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು / ಖಾಸಗಿ ಅಭ್ಯರ್ಥಿಗಳಿಗೆ ಶುಲ್ಕ | ||
1. | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ | 585/- |
2. | ಲ್ಯಾಮಿನೇಷನ್ ಶುಲ್ಕ | 22/- |
ಪುನರಾವರ್ತಿತ ಶಾಲಾ/ಖಾಸಗಿ ಅಭ್ಯರ್ಥಿಗಳ ಶುಲ್ಕ | ||
3. | ಒಂದು ವಿಷಯಕ್ಕೆ | 370/- |
4. | ಎರಡು ವಿಷಯಗಳಿಗೆ | 461/- |
5. | ಮೂರು ವಿಷಯಗಳು ಹಾಗೂ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ | 620/- |
ಪರೀಕ್ಷಾ ಪೂರ್ವ ತಯಾರಿಗಾಗಿ ಪ್ರತಿ ವಿದ್ಯಾರ್ಥಿಯು ಆ ಶೈಕ್ಷಣಿಕ ವರ್ಷದ ಪಠ್ಯಕ್ರಮ ಮತ್ತು ಕೋರ್ಸ್ ರಚನೆಯನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಅಧ್ಯಾಯವಾರು ಅಂಕಗಳ ವಿತರಣೆಯೊಂದಿಗೆ ವಿಷಯಗಳನ್ನು ಅಭ್ಯಸಿಸಲು ಇದು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಟಾಪಿಕ್‌ಗಳನ್ನು ಅಧ್ಯಯನಕ್ಕೆ ಸಹಾಯವಾಗುವಂತೆ ಗುರುತು ಮಾಡಿಟ್ಟುಕೊಳ್ಳುವುದು ಉತ್ತಮ.
ನಾವು ಯಾವುದೇ ಪರೀಕ್ಷೆಗೆ ಸಿದ್ಧತೆ ನಡೆಸಬೇಕಿದ್ದರೂ, ಮೊದಲನೆಯದಾಗಿ ನಮ್ಮ ಸಮಯ ಮತ್ತು ಅಧ್ಯಯನಕ್ಕೆ ಸರಿಹೊಂದುವಂತೆ ಒಂದು ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಈ ವೇಳಾಪಟ್ಟಿಯನ್ನು ತಯಾರಿಸುವ ಮುನ್ನ ಎಲ್ಲಾ ಪತ್ರಿಕೆಗಳು, ಪ್ರಮುಖ ಪ್ರಶ್ನೆಗಳು, ಅಧ್ಯಯನದ ಸಮಯ ಮತ್ತು ಇತರ ಪ್ರಮುಖ ವಿಷಯಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಹೀಗೆ ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅಧ್ಯಯನಕ್ಕೆ ಹೆಚ್ಚು ಒತ್ತು ನೀಡುವುದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಲು ಸಹಕರಿಸುತ್ತದೆ.
ವಿದ್ಯಾರ್ಥಿಗಳು ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಪರಿಹರಿಸಲು ಸಾಧ್ಯವಾದಷ್ಟು ಪ್ರಯತ್ನಿಸಬೇಕು. ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳ ಪ್ರಕಾರಗಳು, ಪರೀಕ್ಷಾ ಮಾದರಿ, ಅಂಕಗಳು, ಸಮಯ ನಿರ್ವಹಣೆಯ ಬಗ್ಗೆ ಹೆಚ್ಚಿನ ಜ್ಞಾನ ಪಡೆಯಲು ಇದು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಕೆಲವು ಪ್ರಶ್ನೆಗಳನ್ನು ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳಿಂದ ಕೇಳುವ ಸಾಧ್ಯತೆಯಿರುತ್ತದೆ. ಆದ್ದರಿಂದ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಮಾದರಿ ಮತ್ತು ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಹೆಚ್ಚು ಅಭ್ಯಾಸ ಮಾಡಿ.
ವಿಷಯಗಳ ಕುರಿತು ನಿಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಲು ನಿಮ್ಮ ಶಾಲೆಯ ಶಿಕ್ಷಕರು ಅಥವಾ ತಜ್ಞರನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆಯಿರಿ. ಯಾವುದೇ ಪರಿಕಲ್ಪನೆ ಕಷ್ಟ ಎನಿಸಿದರೆ, ಅದನ್ನು ಓದುವುದು ಬಿಟ್ಟು ಮುಂದಿನ ಟಾಪಿಕ್‌ಗೆ ಹೋಗುವುದಕ್ಕೆ ಬದಲಾಗಿ, ಶಿಕ್ಷಕರೊಂದಿಗೆ ಚರ್ಚಿಸಿ, ಅರ್ಥಮಾಡಿಕೊಳ್ಳಿ. ಇದು ಗೊಂದಲಗಳನ್ನು ಪರಿಹರಿಸಿ ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ನೀಡಲು ಸಹಕಾರಿಯಾಗುತ್ತದೆ.
ವಿದ್ಯಾರ್ಥಿಗಳು ಪರೀಕ್ಷೆಗೆ ಸೂಕ್ತ ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಅಂತಿಮ ಕ್ಷಣದ ಒತ್ತಡವನ್ನು ನಿವಾರಿಸಿಕೊಳ್ಳಬಹುದು. ಇದು ಪರೀಕ್ಷೆಯ ಬಗ್ಗೆ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ನೀಡಬೇಡಿ. ಪರೀಕ್ಷೆಯ ದಿನ ಪ್ರವೇಶ ಪತ್ರ, ಐಡಿ ಕಾರ್ಡ್ ಮತ್ತು ಇತರ ಅಗತ್ಯ ವಸ್ತುಗಳೊಂದಿಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಿ. ಇದರಿಂದ ಸಮಾಧಾನದಿಂದ ಪರೀಕ್ಷೆ ಬರೆಯಲು ಸಹಾಯವಾಗುತ್ತದೆ.
ಪ್ರ. 1: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅರ್ಜಿ 2023ನ್ನು ಎಲ್ಲಿ ಪಡೆಯಬಹುದು?
ಉತ್ತರ: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅರ್ಜಿ 2023ನ್ನು ಶಾಲಾ ಮುಖ್ಯಸ್ಥರು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ವೆಬ್‌ಸೈಟ್ ಲಿಂಕ್‌ನಲ್ಲಿ ಪಡೆಯಬಹುದು.
ಪ್ರ. 2: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023ಕ್ಕೆ ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?
ಉತ್ತರ: 1 ರಿಂದ 10ನೇ ತರಗತಿಯವರೆಗೆ ಔಪಚಾರಿಕ ಶಿಕ್ಷಣ ಮುಗಿಸಿದ ಎಲ್ಲಾ ಶಾಲಾ ವಿದ್ಯಾರ್ಥಿಗಳು 10ನೇ ತರಗತಿ ಅಂತ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
ಪ್ರ. 3: ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕೆ?
ಉತ್ತರ: ಹೌದು. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು (CCERF) ಮತ್ತು ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುತ್ತಿರುವ ಖಾಸಗಿ ಅಭ್ಯರ್ಥಿಗಳು (CCEPF) ಎಲ್ಲರೂ ಪರೀಕ್ಷಾ ಶುಲ್ಕ ರೂ.462 + ರೂ.21 (ಲ್ಯಾಮಿನೇಷನ್ ಶುಲ್ಕ), ಒಟ್ಟು ರೂ.483 (ಪ್ರತಿ ವಿದ್ಯಾರ್ಥಿಗೆ) ಪಾವತಿಸಬೇಕು.
ಪ್ರ. 4: ಲ್ಯಾಮಿನೇಷನ್ ಶುಲ್ಕದಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗುತ್ತದೆಯೇ?
ಉತ್ತರ: ಇಲ್ಲ. ಪ್ರಥಮ ಬಾರಿಗೆ ಪರೀಕ್ಷೆಗೆ ಕುಳಿತುಕೊಳ್ಳುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅಂಕಪಟ್ಟಿಯ ಲ್ಯಾಮಿನೇಷನ್ ಶುಲ್ಕ ರೂ. 21 (ರೂ. ಇಪ್ಪತ್ತೊಂದು ಮಾತ್ರ) ಗಳನ್ನು ಕಡ್ಡಾಯವಾಗಿ ಪಾವತಿಸಬೇಕು. ಯಾವುದೇ ವಿದ್ಯಾರ್ಥಿಗೂ ಲ್ಯಾಮಿನೇಷನ್ ಶುಲ್ಕ ಪಾವತಿಯಿಂದ ವಿನಾಯಿತಿ ಇರುವುದಿಲ್ಲ. ಆದರೆ ಪುನರಾರ್ವತಿತ ವಿದ್ಯಾರ್ಥಿಗಳು ಪುನಃ ಲ್ಯಾಮಿನೇಷನ್ ಶುಲ್ಕ ಪಾವತಿಸುವ ಅಗತ್ಯವಿಲ್ಲ.
ಪ್ರ. 5: ರಾಜ್ಯ ಪಠ್ಯಕ್ರಮಕ್ಕೆ ವಲಸೆ ಬರುವ ವಿದ್ಯಾರ್ಥಿಗಳು ನೋಂದಣಿ ಶುಲ್ಕ ಪಾವತಿಸಬೇಕೆ?
ಉತ್ತರ: ಹೌದು. ಕೇಂದ್ರ ಪಠ್ಯಕ್ರಮ ಸಿಬಿಎಸ್ಇ, ಐಸಿಎಸ್‌ಇ ಹಾಗೂ ಹೊರ ರಾಜ್ಯ ಪಠ್ಯಕ್ರಮಗಳಿಂದ ರಾಜ್ಯ ಪಠ್ಯಕ್ರಮಕ್ಕೆ ವಲಸೆ ಬರುವ ವಿದ್ಯಾರ್ಥಿಗಳು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರಿಗೆ ರೂ.1000+ರೂ.10= ಒಟ್ಟು ರೂ.1010 ನೋಂದಣಿ ಶುಲ್ಕ ಸಲ್ಲಿಸಿ ರಾಜ್ಯ ಪಠ್ಯಕ್ರಮಕ್ಕೆ ನೋಂದಾಯಿಸಿಕೊಳ್ಳುವುದು ಕಡ್ದಾಯವಾಗಿರುತ್ತದೆ. ರಾಜ್ಯ ಪಠ್ಯಕ್ರಮದಲ್ಲಿ ಅಭ್ಯಾಸ ಮಾಡಲು ಜಿಲ್ಲಾ ಉಪನಿರ್ದೇಶಕರ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023 ಕುರಿತ ಇತ್ತೀಚಿನ ಸುದ್ದಿ ಮತ್ತು ಅಪ್‌ಡೇಟ್‌ಗಳಿಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ. “ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023: ಅರ್ಜಿ ನಮೂನೆ” ಕುರಿತ ಈ ಲೇಖನವು ನಿಮಗೆ ಉಪಯುಕ್ತಕರವಾಗಿತ್ತು ಎಂದು ನಾವು ಭಾವಿಸುತ್ತೇವೆ. ಇಂತಹ ಇನ್ನಷ್ಟು ಕಂಟೆಂಟ್‌ಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ.