
ಎಸ್ಎಸ್ಎಲ್ಸಿ ಬಳಿಕ ಮಾಡಬಹುದಾದ ಟಾಪ್ 5 ಕೋರ್ಸ್ಗಳು
August 19, 2022ಎಸ್ಎಸ್ಎಲ್ಸಿ ಪರೀಕ್ಷೆ 2022-23-ನೋಂದಣಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣದ ಅಂತಿಮ ಹಾಗೂ ಪ್ರಮುಖ ಹಂತವಾಗಿದೆ. ಗುಣಮಟ್ಟವನ್ನು ಕಾಯ್ದುಕೊಂಡು ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸುವುದು ಶಿಕ್ಷಣ ಇಲಾಖೆಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಶ್ರಮಿಸುತ್ತಿದ್ದು, ಪರೀಕ್ಷಾ ಕಾರ್ಯಚಟುವಟಿಕೆಗಳನ್ನು ಗಣಕೀಕರಣಗೊಳಿಸಿರುವುದು ಒಂದು ಮಹತ್ತರ ಮೈಲಿಗಲ್ಲಾಗಿದೆ.
ಶೈಕ್ಷಣಿಕ ವರ್ಷದ ಪರೀಕ್ಷಾ ಕಾರ್ಯಚಟುವಟಿಕೆಗಳು ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ ಜಾಲತಾಣ ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಪ್ರಾರಂಭವಾಗುತ್ತವೆ. ಸದರಿ ಮಾಹಿತಿಯ ಆಧಾರದ ಮೇಲೆ ಪರೀಕ್ಷೆಗೆ ಹಾಜರಾಗಲು ಅಗತ್ಯವಿರುವ ಪ್ರವೇಶಪತ್ರವನ್ನು ಸಿದ್ಧಪಡಿಸಿ, ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ನಂತರ ಮಂಡಳಿಯ ವೆಬ್‌ಸೈಟ್‌ನಲ್ಲಿ ಮುಖ್ಯಶಿಕ್ಷಕರು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿರುವುದು ಮೌಲ್ಯಮಾಪನಗೊಂಡ ನಂತರ ಅಂಕಗಳನ್ನು ಜಿಲ್ಲಾಕೇಂದ್ರದ ಮೌಲ್ಯಮಾಪನ ಕೇಂದ್ರದಿಂದಲೇ ನೇರವಾಗಿ – ಮಂಡಳಿಯ ವೆಬ್‌ಸೈಟ್‌ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ದಾಖಲು ಮಾಡಲಾಗುತ್ತದೆ. ಇದರಿಂದಾಗಿ ಮಾನವ ಶ್ರಮ ಹಾಗೂ ಸಮಯದ ಉಳಿತಾಯವಾಗುತ್ತದೆ, ಜತೆಗೆ ಮೌಲ್ಯಮಾಪನದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬಹುದಾಗಿದೆ. ಇದರ ಫಲವಾಗಿ ಅತಿ ಕಡಿಮೆ ಅವಧಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.
ಶಾಲಾವಾರು ಫಲಿತಾಂಶವನ್ನು ಶಾಲಾ ಮುಖ್ಯಶಿಕ್ಷಕರ ಲಾಗಿನ್‌ಗೆ ಅಂತರ್ಜಾಲದಲ್ಲಿ ನೇರವಾಗಿ ರವಾನಿಸಲಾಗುತ್ತಿದೆ. ಅಲ್ಲದೇ ಉತ್ತೀರ್ಣರಾದ ವಿದ್ಯಾರ್ಥಿಗಳ ಫಲಿತಾಂಶವನ್ನು ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ರವಾನೆ ಮಾಡುವುದಲ್ಲದೆ ಡಿಜಿಲಾಕರ್‌ನಲ್ಲೂ ಪ್ರಕಟಿಸಲಾಗುತ್ತಿರುವುದು ಮಂಡಳಿಯ ಮಹತ್ವದ ಮೈಲಿಗಲ್ಲಾಗಿದೆ.
ಮೌಲ್ಯಮಾಪನಗೊಂಡ ಉತ್ತರಪತ್ರಿಕೆಗಳ ಛಾಯಾಪ್ರತಿಗಾಗಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್ ಮುಖಾಂತರವೇ ‘ಅರ್ಜಿ ಪಡೆದು ನಂತರ ಆನ್‌ಲೈನ್ ಮುಖಾಂತರವೇ ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಲಾಗುತ್ತಿದೆ. ಅಲ್ಲದೇ, ವಲಸೆ ಪ್ರಮಾಣಪತ್ರ ಹಾಗೂ ಅಂಕಪಟ್ಟಿ ನೈಜತೆ ಪರಿಶೀಲನೆಗಾಗಿ ಆನ್‌ಲೈನ್ ಅವಕಾಶ ಕಲ್ಪಿಸಿರುವುದು ಮಂಡಳಿಯ ಹಿರಿಮೆಗೆ ಗರಿ ಮೂಡಿಸಿದಂತಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ, ವಿವಿಧ ಚಟುವಟಿಕೆಗಳನ್ನು ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ 2017-18ನೇ ಸಾಲಿನಿಂದ ವಿದ್ಯಾರ್ಥಿಗಳ ನೋಂದಣಿ ಕಾರ್ಯವನ್ನು ಎಸ್.ಎ.ಟಿ.ಎಸ್ ಆಧಾರಿತ ಮಕ್ಕಳ ಮಾಹಿತಿಯೊಂದಿಗೆ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ ನಿರ್ವಹಿಸಲಾಗಿತ್ತು. ಈ ಪ್ರಕ್ರಿಯೆಯನ್ನು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸಿರುತ್ತಾರೆ.
2018-19ನೇ ಸಾಲಿನಿಂದ ನೋಂದಣಿ ಪ್ರಕ್ರಿಯೆಯನ್ನು ಹೊರತುಪಡಿಸಿ, ಉಳಿದ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳನ್ನು ಮಂಡಳಿಯ ಜಾಲತಾಣದಲ್ಲಿ ಲಭ್ಯವಿರುವ ಶಾಲಾ ಲಾಗಿನ್ ಮುಖಾಂತರ ಮಾಡಲಾಗಿದೆ. 2019-20ನೇ ಸಾಲಿನಿಂದ ನೋಂದಣಿ ಪ್ರಕ್ರಿಯೆಯನ್ನು ಸಹ ಮಂಡಳಿಯ ಜಾಲತಾಣದ ಮುಖಾಂತರ ನಿರ್ವಹಿಸಲಾಗುತ್ತಿದ್ದು, ಈ ಕಾರ್ಯಕ್ಕಾಗಿ ಎಸ್.ಎ.ಟಿ.ಎಸ್ ಡೇಟಾಬೇಸ್ ಅನ್ನು ವೆಬ್ ಸರ್ವೀಸ್ ಮೂಲಕ ಪಡೆಯಲಾಗುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯಲ್ಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ವಿವರಗಳನ್ನು ಅಪ್‌ಲೋಡ್ ಮಾಡಲು ವ್ಯವಸ್ಥೆಯನ್ನು ಮಾಡಲಾಗಿದೆ.
1. ಮಾಹಿತಿಗಳನ್ನು ಅಪ್‌ಲೋಡ್ ಮಾಡಲು ಬಳಸಬೇಕಾದ ಫಾರ್ಮ್ ಅನ್ನು ಲಿಂಕ್ ಜಾಲತಾಣದ ಮೂಲಕ ಪಡೆಯಬಹುದು.
2. ಮುಖ್ಯಶಿಕ್ಷಕರಿಗೆ ಮಂಡಳಿಯ ವತಿಯಿಂದ ಈಗಾಗಲೇ ನೀಡಿರುವ ಶಾಲಾ ಲಾಗಿನ್ Username and Password ಬಳಸಿ ಆನ್‌ಲೈನ್ ನೋಂದಣಿ ಕಾರ್ಯ ಮಾಡಬಹುದಾಗಿದೆ.
3. ಎಸ್.ಎಸ್.ಎಲ್.ಸಿ. ಪರೀಕ್ಷಾ ಆನ್‌ಲೈನ್ ನೋಂದಣಿಯ ಬಗ್ಗೆ ಅಧಿಸೂಚನೆ, ಸುತ್ತೋಲೆ ಮತ್ತು ಮಾರ್ಗದರ್ಶಿಯನ್ನು ಮಂಡಳಿಯ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.
4. ಆನ್‌ಲೈನ್ ಡೇಟಾ ಎಂಟ್ರಿ ಪ್ರಾರಂಭಿಸುವ ಮೊದಲು ಶಾಲೆಯ ಪ್ರತಿ ವಿದ್ಯಾರ್ಥಿಯ ಭಾವಚಿತ್ರ (60-80 KB) ಹಾಗೂ ಸಹಿಯನ್ನು (40-50 KB) ಸ್ಕ್ಯಾನ್ ಮಾಡಿಟ್ಟುಕೊಳ್ಳುವುದು. (jpeg format) ಮಾಡಿ ಅವರ ಎಸ್.ಎ.ಟಿ.ಎಸ್. ನೋಂದಣಿ ಸಂಖ್ಯೆಯಂತೆ ಸೇವ್ ಮಾಡಬೇಕು.
5. ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಂದಣಿಗೆ ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಆನ್‌ಲೈನ್‌ನಲ್ಲಿ ಸೃಜಿಸಲಾಗುವ ಪರೀಕ್ಷಾ ಶುಲ್ಕದ ಚಲನ್‌ನನ್ನು ಬ್ಯಾಂಕ್‌ನಲ್ಲಿ ಪಾವತಿಸಿ ಚಲನ್‌ನ್ನು ಮಂಡಳಿಗೆ ಸಲ್ಲಿಸಬೇಕಾಗಿತ್ತದೆ.
6. ಪ್ರಸ್ತುತ ಆನ್‌ಲೈನ್ ಮೂಲಕ ಭರ್ತಿ ಮಾಡಲಾದ ವಿದ್ಯಾರ್ಥಿಗಳ ವಿವರಗಳು ಅಂಕಪಟ್ಟಿ ಹಾಗೂ ವರ್ಗಾವಣೆ ಪತ್ರಗಳಲ್ಲಿ ನಮೂದಾಗುವುದರಿಂದ ಯಾವುದೇ ತಪ್ಪುಗಳು ಆಗದಂತೆ ಎಚ್ಚರಿಕೆ ವಹಿಸಲು ಮಂಡಳಿ ಸೂಚಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳ) ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ವಿದ್ಯಾರ್ಥಿಗಳ ವಿವರಗಳಲ್ಲಿ ತಿದ್ದುಪಡಿಗಳಿದ್ದಲ್ಲಿ ಆನ್‌ಲೈನ್ ಮೂಲಕ ಅಪ್‌ಡೇಟ್ ವ್ಯವಸ್ಥೆಯನ್ನು ಮಾಡಲಾಗಿದೆ.
ಮಂಡಳಿಯ ಜಾಲತಾಣದಲ್ಲಿ ಲಭ್ಯವಿರುವ ತಂತ್ರಾಂಶವನ್ನು ಬಳಸಿ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯಸ್ಥರು ಆಯಾ ಶಾಲೆಯ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು, ಪರಿಶೀಲಿಸಿ ಹಾಗೂ ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡಬಹುದಾಗಿದೆ.
ಅಭ್ಯರ್ಥಿಯ ಹೆಸರು
ತಂದೆಯ ಹೆಸರು
ತಾಯಿಯ ಹೆಸರು
ಜನ್ಮ ದಿನಾಂಕ
ಲಿಂಗ
ದೈಹಿಕ ಸ್ಥಿತಿ
ಧರ್ಮ
ಫೋಟೋ
ಸಹಿ
ಇವುಗಳಲ್ಲಿ ಯಾವುದಾದರು ತಪ್ಪು ಇದ್ದಲ್ಲಿ, ತಿದ್ದುಪಡಿ ಮಾಡಿ ಪರಿಷ್ಕೃತ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.
ಶಾಲಾ ಅಭ್ಯರ್ಥಿಗಳು ಎಸ್.ಎ.ಟಿ.ಎಸ್ ನಂಬರ್ (SATS NUMBER), ಖಾಸಗಿ ಅಭ್ಯರ್ಥಿಗಳು ರೆಫೆರೆನ್ಸ್ ನಂಬ (REFERENCE NUMBER) ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ನೋಂದಣಿ ಸಂಖ್ಯೆ (REGISTRATION NUMBER) ನಮೂದಿಸಿ ಆಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ನಿಗದಿತ ಅವಧಿಯೊಳಗೆ ಮಾಡಬಹುದಾಗಿರುತ್ತದೆ.
ಪುನರಾವರ್ತಿತ ಅಭ್ಯರ್ಥಿಗಳಿಗೆ ಫೋಟೋ ಮತ್ತು ಸಹಿಯನ್ನು ಮಾತ್ರ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಮೇಲ್ಕಂಡ ಈ ಅಂಶಗಳನ್ನು ಹೊರತುಪಡಿಸಿ ಮಾಧ್ಯಮ, ವಿದ್ಯಾರ್ಥಿಯ ಬಗೆ (Type of the Student) ಹಾಗು ವಿಷಯಗಳಲ್ಲಿ ಯಾವುದಾದರೂ ಬದಲಾವಣೆಗಳಿದ್ದಲ್ಲಿ ಮಂಡಳಿಯಲ್ಲಿನ ಆಯಾ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಲಿಖಿತವಾಗಿ ಮನವಿಯನ್ನು ನಿಗದಿತ ಸಮಯದೊಳಗೆ ಸಲ್ಲಿಸಬೇಕಾಗಿರುತ್ತದೆ.
ಎಸ್.ಎಸ್.ಎಲ್.ಸಿ, ಪರೀಕ್ಷೆಯನ್ನು ಬರೆದು ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಹಾಗೂ ಈ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಎಲ್ಲಾ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗೆ ಜೂನ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪೂರಕ ಪರೀಕ್ಷೆ ಬರೆಯಲು / ನೋಂದಾಯಿಸಲು ಕೆಳಕಂಡಂತಹ ಕ್ರಮವಹಿಸಲು ಮಂಡಳಿ ಸೂಚಿಸಿದೆ.
2002-03 ರಿಂದ 2018-19ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ ಲಿಂಕ್ ಜಾಲತಾಣದ School Login ಮೂಲಕ ನೋಂದಣಿ ಮಾಡುತ್ತಾರೆ.
ಶಾಲಾ ಲಾಗಿನ್‌ನಲ್ಲಿ Registration for June Exam ಅನ್ನು ಕ್ಲಿಕ್ ಮಾಡಿದಾಗ Upload Repeaters Details ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ.
ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು ತೆರೆದುಕೊಳ್ಳುತ್ತವೆ. ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ಅಭ್ಯರ್ಥಿಗಳ ಭಾಷಾ ಸಂಯೋಜನೆ ಹಾಗೂ ಕೋರ್ ವಿಷಯಗಳ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ವಿದ್ಯಾರ್ಥಿಯ ಭಾವಚಿತ್ರ ಹಾಗೂ ಸಹಿಯ ಮಾಹಿತಿಗಳನ್ನು ಪರಿಶೀಲಿಸಿಕೊಂಡು ಮಾಹಿತಿಯನ್ನು Save ಮಾಡುವುದು, ಒಂದು ವೇಳೆ ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ ಇಲ್ಲದಿದ್ದಲ್ಲಿ ಅಥವಾ ಸ್ಪಷ್ಟವಾಗಿ ಇಲ್ಲದಿದ್ದಲ್ಲಿ ಅಥವಾ ತಪ್ಪಾಗಿದ್ದಲ್ಲಿ ಸರಿಯಾದ ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಪರೀಕ್ಷೆ ನೋಂದಾಯಿಸಲು ಈ ಹಿಂದೆ ಇದ್ದಂತೆ MSA ಅರ್ಜಿಗಳನ್ನು ಭರ್ತಿ ಮಾಡಿ ಅರ್ಜಿ ಮೂಲಕ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿರುವುದಿಲ್ಲ. ಇಂತಹ ಅಭ್ಯರ್ಥಿಗಳ ಎಂ.ಎಸ್.ಎ ಫಾರ್ಮ್‌ನಲ್ಲಿ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳನ್ನು ಅಂಟಿಸಿ ಧೃಡೀಕರಿಸಿ ಸಲ್ಲಿಸಬೇಕು, ಎಂ.ಎಸ್.ಎ ಅರ್ಜಿಗಳನ್ನು ಪರಿಶೀಲಿಸುವಾಗ ಎಂ.ಎಸ್.ಎ.ನಲ್ಲಿರುವ ಶಾಲಾ ಸಂಕೇತವು ತಮ್ಮ ಶಾಲೆಯದೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಈ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ನಿಗಧಿತ ಬ್ಯಾಂಕ್ NEFT ಚಲನ್ ಮೂಲಕ ಪಾವತಿಸಿ ಎಂ.ಎಸ್.ಎ ಅರ್ಜಿ, ಭಾವಚಿತ್ರ, ಶುಲ್ಕ ಪಾವತಿಯ ಚಲನ್‌ನೊಂದಿಗೆ ಮಂಡಳಿಗೆ ಸಲ್ಲಿಸಬೇಕು. ಈ ಮೂರು ಮಾಹಿತಿಗಳಿದ್ದಲ್ಲಿ ಮಾತ್ರ ಅರ್ಜಿಗಳನ್ನು ಪರಿಗಣಿಸಲಾಗುವುದು, ಇಲ್ಲವಾದಲ್ಲಿ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಒಂದು ವೇಳೆ ಈ ವಿದ್ಯಾರ್ಥಿಗಳ ಎರ.ಎಸ್.ಎ.ಗಳು ಶಾಲೆಯಲ್ಲಿ ಲಭ್ಯವಿಲ್ಲದಿದ್ದಲ್ಲಿ ಮಂಡಳಿಯ ವಿಭಾಗೀಯ ಕಛೇರಿಗಳಿಂದ ಪಡೆದು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಗಳ ಭಾವಚಿತ್ರ 60 ದಿಂದ 80 kb ಹಾಗೂ ಸಹಿಯನ್ನು 10 ದಿಂದ 50 kb ಯಲ್ಲಿ ಅಪ್‌ಲೋಡ್ ಮಾಡಬೇಕು (jpeg format)
ಪರೀಕ್ಷಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪಾವತಿಸಲು ಮತ್ತು ಆನ್‌ಲೈನ್‌ನಲ್ಲಿ ಅಭ್ಯರ್ಥಿಗಳ ವಿವರಗಳನ್ನು ನೋಂದಾಯಿಸಲು ಮೇಲೆ ನಿಗದಿಪಡಿಸಿರುವ ದಿನಾಂಕದ ನಂತರ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲು ಅವಕಾಶವಿರುವುದಿಲ್ಲ. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಹಾಜರಾಗಿ ಕೊರತೆಯಿಂದ ಬರೆಯದಿರುವ ಶಾಲಾ ವಿದ್ಯಾರ್ಥಿಗಳು ಜೂನ್ ಪೂರಕ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ಖಾಸಗಿ ಅಭ್ಯರ್ಥಿಯಾಗಿ ಪ್ರಥಮ ಬಾರಿಗೆ ಪೂರಕ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ. ಮಾರ್ಚ್/ಏಪ್ರಿಲ್ ಪರೀಕ್ಷೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಪಡೆದು ಅನಾರೋಗ್ಯ, ಅಪಘಾತದಿಂದ ಆಸ್ಪತ್ರೆಗೆ ಚಿಕಿತ್ಸೆಗೊಳಗಾಗಿ ದಾಖಲಾದ ಪ್ರಕರಣಗಳಲ್ಲಿ, ಮತ್ತು ಇನ್ನಿತರ ಕಾರಣಗಳಿಂದ ಆ ಪರೀಕ್ಷೆಯನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳು ಜೂನ್ ಪರೀಕ್ಷೆಗೆ ನಿಗದಿತ ಪರೀಕ್ಷಾ ಶುಲ್ಕ ಪಾವತಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.
ಒಂದು ಶಾಲೆಯ ವಿದ್ಯಾರ್ಥಿಗಳ ಅರ್ಜಿಗಳನ್ನು ಯಾವುದೇ ಕಾರಣಗಳಿಂದ ಮತ್ತೊಂದು ಶಾಲೆಯ ಮುಖೇನ ಸಲ್ಲಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
2003ಕ್ಕೂ ಹಿಂದಿನ ಮನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ನಿಗದಿತ ಬ್ಯಾಂಕ್ NEFT ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಾವತಿಸಿ ಎಂ.ಎಸ್.ಎ. ಪ್ರತಿಯೊಂದಿಗೆ ಮೂಲ ಚಲನ್ ಪ್ರತಿಯನ್ನು ಮಂಡಳಿಗೆ ಸಲ್ಲಿಸುವುದು, ಮೇಲೆ ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದನ್ನು ಇನ್ನೊಮ್ಮೆ ಶಾಲಾ ಮುಖ್ಯಸ್ಥರಿಗೆ ಸ್ಪಷ್ಟವಾಗಿ ತಿಳಿಸಿದೆ.
ಅನುತ್ತೀಣ ವಿದ್ಯಾರ್ಥಿಗಳು ಛಾಯಾಪ್ರತಿ, ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಫಲಿತಾಂಶಕ್ಕೆ ಜೂನ್ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಾಗಿ ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಪರೀಕ್ಷಾರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಜೂನ್, ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನಾಮಯಾದಿ ಪಟ್ಟಿ (Norminal Roll ಅನ್ನು Download ಮಾಡುವುದು, ನಂತರ ಪರೀಕ್ಷಾ ಶುಲ್ಕದ ಚಲನ್ Generate ಮಾಡಿ ಚಲನ್‌ನಲ್ಲಿ ಮುದ್ರಿತವಾದ ಪರೀಕ್ಷಾ ಶುಲ್ಕವನ್ನು ಬ್ಯಾಂಕ್‌ಗೆ ಜಮಾ ಮಾಡಬೇಕಾಗುತ್ತದೆ.
ಶಾಲಾ ಮುಖ್ಯಸ್ಥರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶುಲ್ಕವನ್ನು ಮಂಡಳಿ ಜಾಲತಾಣದಲ್ಲಿ ಚಲನ್ ರಚಿಸಿಕೊಂಡು ರಾಷ್ಟ್ರೀಕೃತ ಬ್ಯಾಂಕ್‌ನಲ್ಲೇ ಜಮಾ ಮಾಡಬೇಕು. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳ ವಿವರಗಳನ್ನು ನೋಂದಣಿ ಮಾಡಿದ ನಂತರ ನಾಮಯಾದಿ ಪಟ್ಟಿ (Nominal Roll) Download ಮಾಡಿಕೊಂಡು, ಮೂಲ ಬ್ಯಾಂಕ್ ಚಲನ್‌ನೊಂದಿಗೆ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಶಾಖಾಧಿಕಾರಿಗಳಿಗೆ ತಲುಪಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ವಿಭಾಗೀಯ ಕಾರ್ಯದರ್ಶಿಗಳಿಗಾಗಲಿ, ಜಿಲ್ಲಾ ಉಪನಿರ್ದೇಶಕರಿಗಾಗಲಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗಾಗಲಿ ಈ ಅರ್ಜಿಗಳನ್ನು ಸಲ್ಲಿಸಬಾರದು. ಲಕೋಟೆಯ ಮೇಲೆ ಜೂನ್- ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಚಲನ್’ ಎಂದು ಬರೆಯುವುದು,
2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಎಂ.ಎಸ್.ಎ ಮೂಲಕ ಸಲ್ಲಿಸುವ ಪ್ರಸ್ತಾವನೆಯ ಲಕೋಟೆಯ ಮೇಲೆ ಜೂನ್ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಅರ್ಜಿಗಳು ಎಂದು ಬರೆಯುವುದು, ಹಾಗೂ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಂಡಳಿಯ ಅಧಿಕಾರಿಗಳ ಹೆಸರು ಮತ್ತು ಶಾಖೆಯನ್ನು ಲಕೋಟೆಯ ಮೇಲೆ ತಪ್ಪದೇ ಬರೆಯಬೇಕು.
ಪ್ರಸ್ತಾವನೆ ಸಲ್ಲಿಸಲು ಮಂಡಳಿ ನಿಗದಿಪಡಿಸಿರುವ ಅಂತಿಮ ದಿನಾಂಕ “ಸಾರ್ವತ್ರಿಕ ರಜಾ ದಿನ” ಎಂಬುದಾಗಿ ಘೋಷಿಸಿದ್ದಲ್ಲಿ ಮಾರನೇ ಕೆಲಸದ ದಿನವನ್ನು ಕೊನೆಯ ದಿನಾಂಕವೆಂದು ಪರಿಗಣಿಸುವುದು. ಸಂಬಂಧಿಸಿದ ಶಾಲಾ ಮುಖ್ಯಸ್ಥರು ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ಲಕೋಟೆಯ ಮೇಲೆ ತಪ್ಪದೇ ಬರೆಯಬೇಕು.
ಪ್ರ. 1: ಎಸ್.ಎಸ್.ಎಲ್.ಸಿ ಪ್ರಥಮ ಭಾಷೆಯ ಗರಿಷ್ಠ ಅಂಕಗಳು ಹಾಗೂ ಪರೀಕ್ಷಾ ಅವಧಿ ಎಷ್ಟು?
ಉತ್ತರ: ಎಸ್.ಎಸ್.ಎಲ್.ಸಿ ಪ್ರಥಮ ಭಾಷೆಯು 125 ಅಂಕಗಳನ್ನು ಒಳಗೊಂಡಿದೆ ಹಾಗೂ ಪರೀಕ್ಷೆ ಅವಧಿ 3 ಗಂಟೆ 15 ನಿಮಿಷಗಳು.
ಪ್ರ. 2: ಕೋರ್ ವಿಷಯಗಳ ಪರೀಕ್ಷೆ ಅವಧಿ ಹಾಗೂ ಗರಿಷ್ಠ ಅಂಕಗಳು ಎಷ್ಟು?
ಉತ್ತರ: ಕೋರ್ ವಿಷಯಗಳ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳು ಹಾಗೂ ಗರಿಷ್ಠ ಅಂಕಗಳು 100.
ಪ್ರ. 3: ಎಸ್.ಎಸ್.ಎಲ್.ಸಿಯ ಕೋರ್ ವಿಷಯಗಳು ಯಾವುವು?
ಉತ್ತರ: ಎಸ್.ಎಸ್.ಎಲ್.ಸಿ ಕೋರ್ ವಿಷಯಗಳು ಈ ರೀತಿ ಇವೆ – ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಮಾಜ ಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಹಿಂದೂಸ್ತಾನಿ/ಕರ್ನಾಟಕ ಸಂಗೀತ.
ಪ್ರ. 4: ಕಿರಿಯ ತಾಂತ್ರಿಕ ಕಾಲೇಜುಗಳು ಎಂದರೆ ಏನು?
ಉತ್ತರ: ಎಸ್.ಎಸ್.ಎಲ್.ಸಿ ಪರೀಕ್ಷೆಯ ಆರು ವಿಷಯಗಳ ಜೊತೆಗೆ ತಾಂತ್ರಿಕ ಶಿಕ್ಷಣ ಮಂಡಳಿ ನಿಗದಿಪಡಿಸಿರುವ ವಿಷಯಗಳನ್ನು ಕಿರಿಯ ತಾಂತ್ರಿಕ ಶಾಲಾ ವಿದ್ಯಾರ್ಥಿಗಳು ತೆಗೆದುಕೊಂಡು ಅಭ್ಯಾಸ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಒಟ್ಟು 11 ಕಿರಿಯ ತಾಂತ್ರಿಕ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ 06 ಸರ್ಕಾರಿ ಶಾಲೆಗಳಾಗಿದ್ದು, ಉಳಿದ 05 ಶಾಲೆಗಳು ಖಾಸಗಿ ಶಾಲೆಗಳಾಗಿವೆ.
ಪ್ರ. 5: ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳು (Answer Booklet) ಎಷ್ಟು ಪುಟಗಳನ್ನು ಹೊಂದಿರುತ್ತದೆ?
ಉತ್ತರ: ಗಣಿತ ವಿಷಯಕ್ಕೆ 28 ಪುಟಗಳಿರುವ ನಕ್ಷೆ ಒಳಗೊಂಡಿರುವ ಮುಖ್ಯ ಉತ್ತರ ಪತ್ರಿಕೆಗಳನ್ನು ನೀಡಲಾಗುತ್ತದೆ ಹಾಗೂ ಉಳಿದ ವಿಷಯಗಳಿಗೆ 20 ಪುಟಗಳಿರುವ ಮುಖ್ಯ ಉತ್ತರಪತ್ರಿಕೆಗಳನ್ನು ಮಂಡಳಿಯಿಂದ ಸರಬರಾಜು ಮಾಡಲಾಗುತ್ತದೆ.
ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆ 2022-23: ನೋಂದಣಿ ಕುರಿತು ಎಲ್ಲಾ ಅಗತ್ಯ ಮಾಹಿತಿಯನ್ನು ನಿಮಗೆ ಒದಗಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಯೋಜಿಸುತ್ತಿರುವ ಅಭ್ಯರ್ಥಿಗಳು Embibe ನಲ್ಲಿ ಎಸ್‌ಎಸ್ಎಲ್‌ಸಿ ಲರ್ನ್ ನೋಡಿ. ನಿಮ್ಮ ಪಠ್ಯಕ್ರಮಕ್ಕೆ ಮ್ಯಾಪ್ ಮಾಡಲಾದ 3D ವಿಡಿಯೋಗಳನ್ನು ನೋಡುತ್ತಾ ಪಠ್ಯಗಳನ್ನು ಕಲಿಯಿರಿ. ಬಳಿಕ ಅಣಕು ಟೆಸ್ಟ್ ತೆಗೆದುಕೊಂಡು ನೀವು ಎಲ್ಲಿ ತಪ್ಪು ಮಾಡುತ್ತಿದ್ದೀರಿ ಎಂಬುದನ್ನು ಗುರುತಿಸಿಕೊಳ್ಳಿ. ವಾಸ್ತವಿಕ ಪರೀಕ್ಷೆಗಿಂತ ಮುನ್ನ ನಿಮ್ಮ ತಪ್ಪುಗಳನ್ನು ಗುರುತಿಸಿಕೊಳ್ಳುವುದು ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈಯುವುದರ ಮೊದಲ ಹೆಜ್ಜೆಯಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ಸಿ ಪರೀಕ್ಷೆ 2023 ನೋಂದಣಿ ಕುರಿತ ಇತ್ತೀಚಿನ ಸುದ್ದಿ ಮತ್ತು ಅಪ್ಡೇಟ್‌ಗಳಿಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ. “ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ಸಿ ಪರೀಕ್ಷೆ 2022-23: ನೋಂದಣಿ” ಕುರಿತ ಈ ಲೇಖನವು ನಿಮಗೆ ಉಪಯುಕ್ತಕರವಾಗಿತ್ತು ಎಂದು ನಾವು ಭಾವಿಸುತ್ತೇವೆ. ಇಂತಹ ಇನ್ನಷ್ಟು ಕಂಟೆಂಟ್‌ಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ.